ಡೈಲಿ ವಾರ್ತೆ: 28/OCT/2024
ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಾೈಬ್ರಕಟ್ಟೆ ಶಾಖೆಯ ಸ್ಥಳಾಂತರ ಸಮಾರಂಭ
ಕೋಟ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಾೈಬ್ರಕಟ್ಟೆ ಶಾಖೆಯು ಬ್ರಹ್ಮಾವರ- ಹಾಲಾಡಿ ಮುಖ್ಯರಸ್ತೆ ಯಲ್ಲಿರುವ ಸಾೈಬ್ರಕಟ್ಟೆಯ ಎಸ್.ಎಸ್. ಕಾಂಪ್ಲೆಕ್ಸ್ನ ನೆಲ ಅಂತಸ್ತಿಗೆ ಸ್ಥಳಾಂತರಗೊಂಡಿದ್ದು ಸಂಪೂರ್ಣ ಹವಾನಿಯಂತ್ರಿತ ಸ್ಥಳಾಂತರ ಶಾಖೆ ಉದ್ಘಾಟನೆ ಹಾಗೂ ಎಟಿಎಂ ಉದ್ಘಾಟನೆ ಅ. 28 ರಂದು ಸೋಮವಾರ ನಡೆಯಿತು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ, ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಸ್ಥಳಾಂತರ ಶಾಖೆಯನ್ನು ಉದ್ಘಾಟಿಸಿದರು.
ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಮಾತನಾಡಿ ಗ್ರಾಮೀಣ ಭಾಗದ ಜನರ ಸ್ವಾವಲಂಬಿ ಬದುಕಿಗೆ ಸಹಕಾರಿ ಬ್ಯಾಂಕ್ ಗಳು ಆಸರೆಯಾಗಿದೆ.
ವಾಣಿಜ್ಯ ಬ್ಯಾಂಕ್‌ಗಳ ತವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವ ವಾಣಿಜ್ಯ ಬ್ಯಾಂಕ್‌ಗಳು ಕಾಣುತ್ತಿಲ್ಲ. ಭಾಷೆ, ಸಂಸ್ಕೃತಿಯನ್ನು ಅರಿಯದ ಸಿಬ್ಬಂದಿಗಳು ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ.
ಗ್ರಾಮೀಣ ಜನರ ಅಭಿವೃದ್ಧಿಯ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕಾರ್ಯಾಚರಿಸುತ್ತಿದೆ. ಜನರಿಗೆ ಅಗತ್ಯವಿರುವ ಸೇವೆಯನ್ನು ಮನೆಬಾಗಿಲಿಗೆ ತೆಗೆದುಕೊಂಡು ಹೋಗಿದೆ.
ಸ್ವಾತಂತ್ರ್ಯಕ್ಕೂ ಮುನ್ನವೇ ಸಹಕಾರಿ ಕ್ಷೇತ್ರವಿದ್ದು, ಸಹಕಾರಿಯ ಮಹತ್ವ ಅವರಿಗೂ ತಿಳಿದಿತ್ತು ಎಂದು ರಾಜೇಂದ್ರ ಕುಮಾರ್ ಹೇಳಿದರು.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಡಾ.ಎಂ.ಎನ್. ರಾಜೇಂದ್ರ ಕುಮಾರ್‌ರ ಮಾರ್ಗದರ್ಶನದ ದಕ್ಷ ಆಡಳಿತ ಮಂಡಳಿ, ಪ್ರಾಮಾಣಿಕ ಮತ್ತು ನಗುಮೊಗದ ಸಿಬ್ಬಂದಿ, ಪೂರಕ ವಾತಾವರಣದೊಂದಿಗೆ ಬ್ಯಾಂಕ್ ಉತ್ತುಂಗದ ಶಿಖರಕ್ಕೇರಿದ್ದು, ರೈತರಿಗೆ ಪೂರಕವಾಗಿ ಸ್ಪಂದಿಸುತ್ತಿದೆ ಎಂದರು.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ, ಶಿರಿಯಾದ ವ್ಯವಸಾಯ ಸೇವಾ ಸಹಕಾರಿ ಸಂಘ ಸಾೈಬ್ರಕಟ್ಟೆ
ಅಧ್ಯಕ್ಷ ಬಿ. ಪ್ರದೀಪ್ ಬಲ್ಲಾಳ್, ಶಿರಿಯಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಧೀಂದ್ರ ಶೆಟ್ಟಿ, ಶಾಖಾ ಕಟ್ಟಡ ಮಾಲೀಕರಾದ ಸುರೇಶ್ ಶೆಟ್ಟಿ ಬಿ., ಶರತ್ ಕುಮಾರ್ ಶೆಟ್ಟಿ, ಸಹಕಾರ ಸಂಘಗಳ ಉಪನಿಬಂಧಕ ಕೆ.ಆರ್. ಲಾವಣ್ಯ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಕಾರಿ (ಪ್ರಭಾರ) ಗೋಪಾಲಕೃಷ್ಣ ಭಟ್ ಕೆ., ನಿರ್ದೇಶಕರಾದ ಎಸ್. ರಾಜು ಪೂಜಾರಿ, ಶಶಿಕುಮಾರ್ ರೈ ಬಿ., ಕೆ. ಹರಿಶ್ಚಂದ್ರ, ಎಂ. ಮಹೇಶ್ ಹೆಗ್ಡೆ, ಬಿ. ಅಶೋಕ್ ಕುಮಾರ್ ಶೆಟ್ಟಿ, ರಾಜೇಶ್ ರಾವ್ ಉಪಸ್ಥಿತರಿದ್ದರು.
ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ದಾಮೋದರ ಶರ್ಮ ಕರ‍್ಯಕ್ರಮ ನಿರೂಪಿಸಿದರು. ಸ್ಥಳೀಯ ಸಹಕಾರಿಗಳಿಂದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಲಾಯಿತು.