ಡೈಲಿ ವಾರ್ತೆ: 11/NOV/2024
ಮಂಗಳೂರು: ಆಸ್ಪತ್ರೆಯ 4 ನೇ ಮಹಡಿಯಿಂದ ಹಾರಿ ಬಾಣಂತಿ ಮೃತ್ಯು!
ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿಯೋರ್ವರು ಮೃತಪಟ್ಟ ಘಟನೆ ನ. 11 ಸೋಮವಾರ ಬೆಳಗ್ಗೆ ಸಂಭವಿಸಿದೆ.
ಮೃತಪಟ್ಟ ಮಹಿಳೆ ಕಾರ್ಕಳದ ರಂಜಿತಾ (28) ಎಂದು ಗುರುತಿಸಲಾಗಿದೆ.
ಅವರು ಹೆರಿಗೆಗಾಗಿ ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಹಲವು ಕ್ಲಿಷ್ಟ ಆರೋಗ್ಯ ಸಮಸ್ಯೆಯಿಂದ ಲೇಡಿಗೋಷನ್ ಗೆ ಅ.28 ಕ್ಕೆ ದಾಖಲಾಗಿದ್ದರು. ಅ.30 ಕ್ಕೆ ಸಿಸೇರಿಯನ್ ಹೆರಿಗೆಯಾಗಿತ್ತು. ಮಗು ಎನ್ ಐಸಿಯುನಲ್ಲಿತ್ತು. ನ.3 ಕ್ಕೆ ಮಗು ಮೃತಪಟ್ಟಿತ್ತು. ಮಹಿಳೆ ಗುಣಮುಖರಾಗಿ ಸೋಮವಾರ ಡಿಸ್ಚಾರ್ಜ್ ಗೆಂದು ವೈದ್ಯರು ಸೂಚಿಸಿದ್ದರು. ಮನೆಯವರು ಕೂಡ ಸಿದ್ದರಾಗಿ ಬಂದಿದ್ದರು. ಆದರೆ ಮಹಿಳೆ ಏಕಾಏಕಿ ನಾಲ್ಕನೇ ಮಹಡಿಯಿಂದ ಹಾರಿದ್ದಾರೆ.
ಕೂಡಲೇ ಮಹಿಳೆಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಕೆ ಮೃತಪಟ್ಡಿದ್ದಾರೆಂದು ಆಸ್ಪತ್ರೆಯ ವೈದ್ಯಾಧಿಕಾರಿಯವರು ತಿಳಿಸಿದ್ದಾರೆ.