


ಡೈಲಿ ವಾರ್ತೆ: 14/NOV/2024


ಆರ್ಥಿಕ ನಷ್ಟಕ್ಕೆ ಮನನೊಂದು ದಂಪತಿ ನೇಣಿಗೆ ಶರಣು!
ಕೊಪ್ಪ: ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಹೊನ್ನೂರು ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿಯ ಶವಗಳು ಪತ್ತೆಯಾಗಿವೆ.
ಮೃತರು ಕೊಪ್ಪ ಗ್ರಾಮದ ಸುರೇಶ್ (40), ಪತ್ನಿ ಪಲ್ಲವಿ (28) ಎಂದು ಗುರುತಿಸಲಾಗಿದೆ. ಸುರೇಶ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು. ಉದ್ಯಮದಲ್ಲಿ ನಷ್ಟ ಹಾಗೂ ಸಾಲಗಾರರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮೃತದೇಹಗಳನ್ನು ಕುಶಾಲನಗರ ಸಮುದಾಯ ಅರೋಗ್ಯ ಕೇಂದ್ರದ ಶವಗಾರದಲ್ಲಿ ಇರಿಸಲಾಗಿದೆ.
ಮೃತರು ಇಬ್ಬರು ಪುಟ್ಟ ಕಂದಮ್ಮಗಳನ್ನು ಅಗಲಿದ್ದಾರೆ. ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.