ಡೈಲಿ ವಾರ್ತೆ: 15/NOV/2024
ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿ –
ಮಕ್ಕಳ ಪ್ರತಿಭೆ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಸಹಾಯಕ – ಶಾಸಕ ಕಿರಣ್ ಕೊಡ್ಗಿ
ಕುಂದಾಪುರ: ಮಕ್ಕಳಲ್ಲಿರುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮವು ಸಹಾಯಕವಾಗಲಿದ್ದು ಶಿಕ್ಷಕರು ಮಕ್ಕಳಲ್ಲಿ ಅಡಗಿರುವ ವಿವಿಧ ಪ್ರತಿಭೆಗಳನ್ನು ಕಾರಂಜಿಗಳನ್ನಾಗಿ ಪರಿವರ್ತಿಸುವಲ್ಲಿ ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಎಂದು ಕುಂದಾಪುರ ವಿಧಾನಸಭಾ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ನ.15 ರ ಶುಕ್ರವಾರ ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಹೈಸ್ಕೂಲ್ ಇವರ ಸಹಯೋಗದೊಂದಿಗೆ ಎಕ್ಸಲೆಂಟ್ ಕ್ಯಾಂಪಸ್ ನಲ್ಲಿ
ನಡೆದ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಮಾತನಾಡಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಗಣಪತಿ ಕೆ ಮಾತನಾಡಿ ಮಕ್ಕಳಲ್ಲಿ ಹುದುಗಿರುವ ಭಾವನಾತ್ಮಕ ಕಲೆಗಳ ಅನಾವರಣವೇ ಪ್ರತಿಭಾ ಕಾರಂಜಿಯಾಗಿದೆ.
ಶೈಕ್ಷಣಿಕ ವರ್ಷದಲ್ಲಿ ನಮ್ಮ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದಂತ ಚಟುವಟಿಕೆಗಳು ನಡೆಯುತ್ತಿರುತ್ತವೆ. ಅದರೊಳಗೆ ಪ್ರತಿಭಾ ಕಾರಂಜಿ ಅನ್ನುವುದು ಬಹುಮುಖ್ಯವಾದ ಕಾರ್ಯಕ್ರಮವಾಗಿದೆ.
ಮುಖ್ಯವಾಗಿ ಎಲ್ಲಾ ಮಕ್ಕಳು ಒಂದಲ್ಲಾ ಒಂದು ವಿಭಾಗದಲ್ಲಿ ಭಾಗವಹಿಸಬೇಕು ಎನ್ನುವ ದೃಷ್ಟಿಯಿಂದ ಇಂದು ಸುಮಾರು 50 ವಿವಿಧ ಸ್ಪರ್ಧೆಗಳಿಗೆ ಇಲ್ಲಿ ಅವಕಾಶ ನೀಡಿದ್ದೇವೆ. ಮಕ್ಕಳು ಕೇವಲ ಅಂಕ ಗಳಿಸಿದರೆ ಸಾಕು ಎನ್ನುವ ಹೆತ್ತವರ ಕನಸು ತಪ್ಪು.
ಮಕ್ಕಳಿಗೆ ಶಿಕ್ಷಣದಲ್ಲಿ ಆಸಕ್ತಿ ಹೆಚ್ಚಿಸಿಕೊಳ್ಳಲು, ಅವರ ಪ್ರತಿಭೆಯನ್ನು ಬೆಳಸಿಕೊಳ್ಳಲಿಕ್ಕೆ, ಆಸಕ್ತಿಯನ್ನು ಕುದುರಿಸಿಕೊಳ್ಳಲಿಕ್ಕೆ ಈ ರೀತಿಯ ಕಾರ್ಯಕ್ರಮಗಳು ಅತ್ಯಂತ ಅವಶಕವಾಗಿರುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ ಯುನಿಟ್ ಆಫ್ ಎಮ್.ಎಮ್. ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಇದರ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆ ವಹಿಸಿದ್ದರು.
ಈ ಸಂದರ್ಭದಲ್ಲಿ ಕರಾಟೆ ಸ್ಪರ್ಧೆಯಲ್ಲಿ ರಾಜ್ಯಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿನಿ ನವಮಿ ಶೆಟ್ಟಿಯನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಹೊಂಬಾಡಿ-ಮಂಡಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಶೆಟ್ಟಿ, ಉಪಾಧ್ಯಕ್ಷ ಅರುಣ್ ಕುಮಾರ್ ಹೆಗ್ಡೆ, ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ, ಎಕ್ಸಲೆಂಟ್ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ, ಪ್ರಾ. ಶಾಲಾ ಶಿಕ್ಷಕ ಸಂಘದ ಅಧ್ಯಕ್ಷರಾದ ಗಣೇಶ್ ಕುಮಾರ್ ಶೆಟ್ಟಿ, ಪ್ರೌಢ ಶಾಲಾ ಸಹ. ಶಿ. ಸಂಘ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಮೊದಲದವರು ಉಪಸ್ಥಿತರಿದ್ದರು.
ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೋಭಾ ಎಸ್. ಶೆಟ್ಟಿ ಸ್ವಾಗತಿಸಿದರು.
ಅಭಿನಂದನ್ ಭಟ್ ಕಮಲಶಿಲೆ ಇವರು ಕಾರ್ಯಕ್ರಮ ನಿರೂಪಿಸಿದರು.
ಎಕ್ಸಲೆಂಟ್ ಕಾಲೇಜಿನ ಮುಖ್ಯೋಪಾಧ್ಯಾಯಿನಿ ಸರೋಜಿನಿ ವಂದಿಸಿದರು.