ಡೈಲಿ ವಾರ್ತೆ: 16/NOV/2024

ಶಿಕಾರಿಪುರ: ಆಸ್ಪತ್ರೆ ಆವರಣದ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಬಾಲಕ ಸಾವು – ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಆರೋಪ

ಶಿವಮೊಗ್ಗ: ಆಸ್ಪತ್ರೆ ಆವರಣದಲ್ಲಿ ನೀರಿನ ಸಂಪ್​ಗೆ ಬಿದ್ದು 3 ವರ್ಷದ ಬಾಲಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿಕಾರಿಪುರ ಸರ್ಕಾರಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.

ಮೊಹಮ್ಮದ್ ಐಯಾನ್(3) ಮೃತ ಬಾಲಕ
ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಘಟನಾ ಸ್ಥಳಕ್ಕೆ ಶಿಕಾರಿಪುರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿ ಇಮ್ರಾನ್ ಸಂಬಂಧಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಸಂಬಂಧಿಯ ಆರೋಗ್ಯ ವಿಚಾರಿಸಲು ಕುಟುಂಬ ಆಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆ ಒಳಗಡೆಯಿಂದ ಆಟವಾಡುತ್ತಾ ಮೊಹಮ್ಮದ್ ಹೊರಗೆ ಬಂದಿದ್ದು, ತುಂಬಿದ್ದ ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಮುಚ್ಚಳ ಮುಚ್ಚದಿದ್ದಕ್ಕೆ ತೊಟ್ಟಿಗೆ ಬಿದ್ದು ಮಗು ಸಾವು ಎಂದು ಆರೋಪ ಮಾಡಲಾಗಿದೆ.
ಮಗು ಮೃತಪಟ್ಟ ನಂತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು