


ಡೈಲಿ ವಾರ್ತೆ: 18/NAV/2024


ಪರಶುರಾಮ ನಕಲಿ ಮೂರ್ತಿ ಪ್ರಕರಣ – ಶಿಲ್ಪಿ ಕೃಷ್ಣನಾಯ್ಕಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
ಕಾರ್ಕಳ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ‘ನಕಲಿ ಮೂರ್ತಿ’ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬೆಂಗಳೂರಿನ ಶಿಲ್ಪಿ ಕೃಷ್ಣ ನಾಯ್ಕ(45) ಗೆ ಕಾರ್ಕಳ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಆರೋಪಿ ಕೃಷ್ಣ ನಾಯ್ಕನನ್ನು ನವೆಂಬರ್ 10ರಂದು ಕೇರಳದಲ್ಲಿ ಬಂಧಿಸಿದ್ದ ಪೊಲೀಸರು ನವೆಂಬರ್ 11ರಂದು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ನೇತೃತ್ವದಲ್ಲಿ ಆರೋಪಿಯನ್ನು ವಿಚಾರಣೆಗೊಳಪಡಿಸಲಾಗಿದೆ.
ವಿಚಾರಣೆ ಪೂರ್ಣಗೊಳಿಸಿರುವ ಪೊಲೀಸರು ಆರೋಪಿಯನ್ನು ಕಾರ್ಕಳ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಗೆ ನವೆಂಬರ್ 28ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.