ಡೈಲಿ ವಾರ್ತೆ: 19/NOV/2024
ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ್ಯು
ಹೊಸನಗರ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹೊಸನಗರ ಸಮೀಪದ ಚಿಕ್ಕಮಣತಿ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿ ಚಿಕ್ಕಮಣತಿ ಗ್ರಾಮದ ಅನುದೀಪ್ ಜಿ ಎಂದು ಗುರುತಿಸಲಾಗಿದೆ.
ಎಸ್ಸೆಸ್ಸೆಲ್ಸಿ ಓದುತಿದ್ದ ಅನುದೀಪ್ ಜಿ ನ. 15 ರಂದು ಕೀಟನಾಶಕ ಸೇವಿಸಿ ಅಸ್ವಸ್ಥನಾಗಿದ್ದು ಆತನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಿಗ್ಗೆ ಅನುದೀಪ್ ಜಿ. ಮೃತಪಟ್ಟಿದ್ದಾನೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.