ಡೈಲಿ ವಾರ್ತೆ: 22/NOV/2024
ಹೆಬ್ರಿ: ನಕ್ಸಲ್ ನಾಯಕ ವಿಕ್ರಂ ಗೌಡನ ಎನ್ ಕೌಂಟರ್ ಪ್ರಕರಣ – ಜಯಂತ್ ಗೌಡ ವಿಚಾರಣೆ – ಗ್ರಾಮಸ್ಥರಿಂದ ಠಾಣೆಗೆ ಮುತ್ತಿಗೆ
ಹೆಬ್ರಿ: ನಕ್ಸಲ್ ನಾಯಕ ವಿಕ್ರಂ ಗೌಡನ ಎನ್ ಕೌಂಟರ್ ಪ್ರಕರಣದ ತನಿಖೆಯ ಕುರಿತಾಗಿ ಘಟನೆ ನಡೆದ ಸ್ಥಳದ ನಿವಾಸಿ ಜಯಂತ್ ಗೌಡ ಅವರನ್ನು ಹೆಬ್ರಿ ಪೊಲೀಸರು ವಿಚಾರಣೆಗೆ ವಶಪಡಿಸಿಕೊಂಡಿದ್ದು, ಈ ಕುರಿತು ಗ್ರಾಮಸ್ಥರು ವಿರೋಧಿಸಿ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ನ. 22 ರಂದು ಶುಕ್ರವಾರ ನಡೆದಿದೆ.
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಶುಕ್ರವಾರ ಬೆಳಗ್ಗೆ ಹೆಬ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಆತನನ್ನು ವಶಪಡಿಸಿಕೊಂಡು ಹೆಬ್ರಿ ಠಾಣೆಗೆ ಕರೆ ತಂದಿದ್ದಾರೆ. ಈ ಬಗ್ಗೆ ಆತ ಅಮಾಯಕ ಆತನಿಗೆ ಏನು ತಿಳಿದಿಲ್ಲ ಅಂತವನನ್ನು ಯಾಕೆ ಠಾಣೆಗೆ ಕರೆದುಕೊಂಡು ಬಂದಿದ್ದೀರಿ ಅಲ್ಲಿಯ ವಿಚಾರಿಸಬಹುದಿತ್ತಲ್ಲ ಎಂದು ಮಲೆಕುಡಿಯ ಸಮಾಜದ ಮುಖಂಡರು ಹಾಗೂ ಗ್ರಾಮಸ್ಥರು ಠಾಣಾಧಿಕಾರಿ ಅವರಲ್ಲಿ ಮನವಿ ಮಾಡಿ ಆತನನ್ನು ಕೂಡಲೇ ಬಿಡುವಂತೆ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಸಿದ ಠಾಣಾಧಿಕಾರಿ ಮಹೇಶ್ ಟಿ. ಮೇಲಾಧಿಕಾರಿಗಳಲ್ಲಿ ವಿಚಾರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.