

ಡೈಲಿ ವಾರ್ತೆ: 22/NOV/2024



ಸರ್ಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಸೂಕ್ತ ಆರೋಗ್ಯ ಸೌಲಭ್ಯ ಒದಗಿಸಿ: ಶಾಸಕ ಕಿರಣ್ ಕೊಡ್ಗಿ

ಕುಂದಾಪುರ: ಬಡರೋಗಿಗಳಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಆದ್ಯ ಕರ್ತವ್ಯ. ಸಾರ್ವಜನಿಕರಿಗೆ ಆಸ್ಪತ್ರೆಯಲ್ಲಿ ಸೂಕ್ತ ಆರೋಗ್ಯ ಸೌಲಭ್ಯ ಒದಗಿಸುವಂತೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ನ. 22 ರಂದು ಶುಕ್ರವಾರ ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿದ ಅವರು ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗೆ, ಪರಿಶೀಲನೆ ಸಭೆ ನಡೆಸಿ, ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಇರಬಹುದಾದ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಚಂದ್ರಮರಕಲ, ನಾಗೇಶ್, ಕುಂದಾಪುರ ತಾಲೂಕು ಸಹಾಯಕ ಆಯುಕ್ತ ಮಹೇಶ್ ಚಂದ್ರ ಮತ್ತು ತಾಲೂಕು ವೈದ್ಯಾಧಿಕಾರಿಗಳು ಹಾಗೂ ಜಿಲ್ಲಾ ಡಿಎಚ್ ಓ, ಉಪಸ್ಥಿತರಿದ್ದರು.