

ಡೈಲಿ ವಾರ್ತೆ: 23/NOV/2024



ಗುಂಡ್ಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಿಗ್ಗೆ ಸರಣಿ ಅಪಘಾತ – ವಿದ್ಯಾರ್ಥಿಗಳು ಸೇರಿ ಹಲವು ಮಂದಿಗೆ ಗಾಯ
ಗುಂಡ್ಯ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಿಗ್ಗೆ ಖಾಸಗಿ ಬಸ್, ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ನಡೆದಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ.
ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ. ಇದೆ ವೇಳೆ ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದು ಸರಣಿ ಅಪಘಾತ ನಡೆದಿದೆ.
ಅಪಘಾತದಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯಗೊಡಿದ್ದಾರೆ. ಗಾಯಾಳುಗಳಿಗೆ ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ರವಾನಿಸಲಾಗಿದೆ. ಅಪಘಾತವು ಉಪ್ಪಿನಂಗಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.