

ಡೈಲಿ ವಾರ್ತೆ: 23/NOV/2024



ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂಗೆ ಗೆಲುವು
ಬೆಂಗಳೂರು : ಉಪ ಚುನಾವಣೆ ನಡೆದ ರಾಜ್ಯದ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಈ ಪೈಕಿ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಸೋಲೊಪ್ಪಿಕೊಂಡಿದ್ದಾರೆ.
ಈ ಕುರಿತು ಚುನಾವಣಾ ಆಯೋಗದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.