ಡೈಲಿ ವಾರ್ತೆ:02/DEC/2024

ಮಂಗಳೂರು: ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರ ನಡುವೆ ಮಾರಾಮಾರಿ!

ಮಂಗಳೂರು: ನೂತನವಾಗಿ ಆಯ್ಕೆಯಾದ ಗ್ರಾ.ಪಂ ಸದಸ್ಯರಿಗೆ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ತುಂಬೆ ಚಂದ್ರ ಪ್ರಕಾಶ್‌ ಶೆಟ್ಟಿ ಹಾಗೂ ದ.ಕ ಕಾಂಗ್ರೆಸ್ ಅಧ್ಯಕ್ಷ ಹರೀಶ್‌ ಕುಮಾ‌ರ್ ವಿರುದ್ಧ ಮಾರಾಮಾರಿ ನಡೆದಿದೆ ಎನ್ನಲಾಗಿದೆ.

ದ.ಕ ಕಾಂಗ್ರೆಸ್‌ ಅಧ್ಯಕ್ಷ ಹರೀಶ್ ಕುಮಾ‌ರ್’ಗೆ ಹಲ್ಲೆಯಾಗಿದೆ ಎಂದು ತಿಳಿದು ಬಂದಿದೆ. ಉಪಚುನಾವಣೆಯಲ್ಲಿ ಗೆದ್ದವರಿಗೆ ವೇದಿಕೆಯ ಮೇಲೆ ಸನ್ಮಾನಿಸಬೇಕು ಎಂದು ಪ್ರಕಾಶ್ ಚಂದ್ರ ಶೆಟ್ಟಿ ತುಂಬೆ ಸಲಹೆ ನೀಡಿದರು. ಅದಕ್ಕೊಪ್ಪದ ಅಧ್ಯಕ್ಷ ಹರೀಶ್ ಕುಮಾ‌ರ್ ಗೆದ್ದ ಅಭ್ಯರ್ಥಿಗಳು ಕುಳಿತಲ್ಲೇ ಸನ್ಮಾನಿಸಲಾಗುವುದು ಎಂದಾಗ ಮಾತಿಗೆ ಮಾತು ಬೆಳೆದು ಪರಸ್ಪರ ಕೈ ಮಿಲಾಯಿಸಿಕೊಂಡಿದ್ದಾರೆ ಎನ್ನಲಾಗಿದೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರ ಪ್ರಕಾಶ್‌ ಶೆಟ್ಟಿ ತುಂಬೆ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ ನಾನು ಯಾರ ಮೇಲೂ ಕೈ ಮಾಡಲಿಲ್ಲ ಆದಷ್ಟು ಬೇಗ ಅಧ್ಯಕ್ಷರನ್ನು ಬದಲಿಸಿ ಪಕ್ಷವನ್ನು ಉಳಿಸಿ ಎಂದು ಹೇಳಿದರು.