ಚಂಡಮಾರುತದಿಂದ ಮುಂದಿನ ಎರಡು ದಿನಗಳ ಕಾಲ ಭಾರಿ ಗಾಳಿ, ಮಳೆ ಮುನ್ಸೂಚನೆ- ಉಡುಪಿ ಜಿಲ್ಲೆಯಲ್ಲಿ ನಾಳೆ (ಡಿ.3) ರಂದು ಶಾಲಾ, ಕಾಲೇಜ್‌ಗಳಿಗೆ ರಜೆ ಘೋಷಣೆ

ಉಡುಪಿ: ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದಿಂದಾಗಿ ರಾಜ್ಯದ ಕರಾವಳಿ ಭಾಗದಲ್ಲಿಯೂ ಇದರ ಪರಿಣಾಮ ಇರುವುದರಿಂದ ಮುಂದಿನ 2 ದಿನಗಳ(ಡಿ.03 ಮತ್ತು ಡಿ.04) ಕಾಲ ಹೆಚ್ಚಿನ ಮಳೆ ಹಾಗೂ ಗಾಳಿ ಬೀಸುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ.

ಮುನ್ನೆಚರಿಕೆಯ ಕ್ರಮವಾಗಿ ಡಿ.03 ರಂದು ಶಾಲಾ ಕಾಲೇಜ್‌ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್, ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ವಿಪತ್ುತ ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ, ಕೇಂದ್ರ ಸ್ಥಾನದಲ್ಲಿದ್ದು ವಿಪತ್ತನ್ನು ನಿಭಾಯಿಸಬೇಕು. ಸಾರ್ವಜನಿಕರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾವಜರ್ನಿಕರು ಅಪಾಯಕಾರಿ ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು. ದುರ್ಬಲವಾದ / ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ / ಮರಗಳ ಕೆಳಗೆ ನಿಲ್ಲಬಾರದು. ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶೀತಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌಂಡ್ ಅಥವಾ ಮನೆಯ ಗೋಡೆ, ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಅಗತ್ಯವಿದ್ದಲ್ಲಿ ಈಗಾಗಲೇ ಸಂಬಂಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ್ಟ ಕಾಳಜಿ ಕೇಂದ್ರದಲ್ಲಿ ಕಡ್ಡಾಯವಾಗಿ ಆಶ್ರಯ ಪಡೆದುಕೊಳ್ಳಬೇಕು.

ಸಾರ್ವಜನಿಕರು ಶೀತಲಾವಸ್ಥೆಯಿರುವ ಅಥವಾ ಕುಸಿತದ ಹಂತದ ಕಂಪೌಂಡ್ ಅಥಾ ಮನೆಯ ಗೋಡೆ ಕಂಡುಬಂದಲ್ಲಿ ತುರ್ತುಸೇವೆಗೆ ಶುಲ್ಕರಹಿತ: 1077, ದೂ.ಸಂಖ್ಯೆ: 0820-2574802 ಸಂಪರ್ಕಿಸ ಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ