ಡೈಲಿ ವಾರ್ತೆ:06/DEC/2024
ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಗಂಡು ಚಿರತೆ ಸಾವು
ಚಿಕ್ಕಮಗಳೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಐದು ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇ ಬೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮುದ್ದೆ ಬೋರನಹಳ್ಳಿ ಗ್ರಾಮದ ಏರ್ಟೆಲ್ ಟವರ್ ಬಳಿ ಈ ಅವಘಡ ಸಂಭವಿಸಿದ್ದು 5 ವರ್ಷದ ಗಂಡು ಚಿರತೆ ಸಾವನ್ನಪ್ಪಿದೆ.
ಕಡೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಚಿರತೆ ರಸ್ತೆ ದಾಟುವಾಗ ಟಿಟಿ ವಾಹನಕ್ಕೆ ಸಿಲುಕಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.