ಡೈಲಿ ವಾರ್ತೆ:08/DEC/2024

ಕುಮಟಾ ಶಾಸಕ ದಿನಕರ ಶೆಟ್ಟಿ ಕಾರು ಅಪಘಾತ – ಬೈಕ್ ಸವಾರ ಗಂಭೀರ

ಉತ್ತರ ಕನ್ನಡ: ಕುಮಟಾ ಶಾಸಕ ದಿನಕರ ಶೆಟ್ಟಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಸವಾರ ಗಂಭೀರ ಗಾಯಗೊಂಡ ಘಟನೆ ಡಿ. 8 ರಂದು ಭಾನುವಾರ ರಾಷ್ಟ್ರೀಯ ಹೆದ್ದಾರಿ 66 ರ ಹೊನ್ನಾವರ ಕರ್ಕಿನಾಕ ಬಳಿ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಬಸ್ರಾಣಿಯ ನಾಗಪ್ಪ ಗೌಡ ಎಂದು ಗುರುತಿಸಲಾಗಿದೆ.

ಶಾಸಕರು ತಮ್ಮ ಕಾರ್ ನಲ್ಲಿ ಗಾಯಾಳುವನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದು,‌ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಗಾಯಾಳುವನ್ನು ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.