ಡೈಲಿ ವಾರ್ತೆ:08/DEC/2024

ಕಸ್ತೂರಿ ರಂಗನ್ ವರದಿ ಕುರಿತು ಜನಪರ ಕಾಳಜಿಗಾಗಿ. ಹಾಲಾಡಿ, ಕೊಡ್ಗಿ ಚರ್ಚೆ

ಕುಂದಾಪುರ: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ವಿವಿಧ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಈ ಹಿಂದಿನ ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರು ಹಾಗೂ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರ ಕಚೇರಿಗೆ ಭೇಟಿ ನೀಡಿ ಕಸ್ತೂರಿ ರಂಗನ್ ವರದಿಯ ಬಗ್ಗೆ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಬಗ್ಗೆ ಚರ್ಚಿಸಿದ್ದರು.

ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಇಲಾಖೆ (ಇಕೋ ಸೆನ್ಸಿಟಿ ಜೋನ್) ಪರಿಸರ ಸೂಕ್ಷ್ಮ ಪ್ರದೇಶದ ವಿಚಾರವನ್ನು ಹಾಗೂ ಅಕ್ರಮ ಸಕ್ರಮದ ಅಡಿಯಲ್ಲಿ ಭೂಮಿ ಮಂಜೂರಾತಿ, 94. C, ಹಾಗೂ ಏಕ ವಿನ್ಯಾಸ ನಕ್ಷೆ ಅನುಮೋದನೆಯನ್ನ ಯೋಜನಾ ಪ್ರಾಧಿಕಾರಕ್ಕೆ ನೀಡಿರುವುದರಿಂದ ಜನರಿಗೆ ಆಗುವ ಸಮಸ್ಯೆಗಳ ಕುರಿತು ಸದನದಲ್ಲಿ ಚರ್ಚಿಸುವ ಬಗ್ಗೆ ಜನಪರ ಕಾಳಜಿಗಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಾಲಿ ಹಾಗೂ ಮಾಜಿ ಶಾಸಕರು ಪರಸ್ಪರ ಸುದೀರ್ಘವಾಗಿ ಶಾಸಕರ ಕಛೇರಿಯಲ್ಲಿ ಚರ್ಚಿಸಿದರು.