ಡೈಲಿ ವಾರ್ತೆ:09/DEC/2024

ಜೋಕಾಲಿಯಲ್ಲಿ ಆಡುತ್ತಿದ್ದ ವೇಳೆ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕಿ ಸಾವು

ವಿಟ್ಲ: ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಮಗುವಿಗೆ ಹಗ್ಗ ಸುತ್ತಿ ಪ್ರಾಣಕಳೆದುಕೊಂಡ ಹೃದಯ ವಿದ್ರಾವಕ ಘಟನೆಯೊಂದು ಬಂಟ್ವಾಳ ‌ತಾಲೂಕಿನ‌ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಡಿ.8 ರವಿವಾರ ಸಂಜೆ ನಡೆದಿದೆ.

ಬುಡೋಳಿ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಮೃತ ಬಾಲಕಿ. ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದುಕೊಂಡಿದೆ ಎನ್ನಲಾಗಿದೆ.

ವಿಟ್ಲ ಪೋಲಿಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದಾರೆ.