

ಡೈಲಿ ವಾರ್ತೆ:14/DEC/2024



ಎಲ್ ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು
ದೆಹಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಎಲ್. ಕೆ ಅಡ್ವಾಣಿ (97) ಅನಾರೋಗ್ಯದಿಂದ ಡಿ. 14 ರಂದು ದಿಢೀರ್ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಡ್ವಾಣಿ ಅವರು ಕೆಲವು ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಅವರನ್ನು ನವದೆಹಲಿಯ ಮಥುರಾ ರಸ್ತೆಯ ಅಪೋಲೋ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆಸ್ಪತ್ರೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ತಜ್ಞ ವೈದ್ಯರ ನಿಗಾದಲ್ಲಿ ಅಡ್ವಾಣಿ ಅವರನ್ನು ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.