ಡೈಲಿ ವಾರ್ತೆ:14/DEC/2024

ಮಣಿಪಾಲ: ಬೈಕ್​ಗೆ ಟಿಪ್ಪರ್ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ

ಉಡುಪಿ: ಮಣಿಪಾಲ ನಗರ ಠಾಣೆ ವ್ಯಾಪ್ತಿಯ ಅಲೆವೂರು – ಮಣಿಪಾಲ ರಸ್ತೆಯ ಶಾಂತಿನಗರದ ಬಳಿ ತಿರುವಿನಲ್ಲಿ ಮರಳು ಸಾಗಾಟದ ಟಿಪ್ಪರ್‌ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಬೈಕ್‌ ಸವಾರ ಕಾರವಾರ ಮೂಲದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು.
ಸಹಸವಾರ ಹಿರಿಯಡ್ಕ ಪರಿಸರದ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಘಟನೆ ಶುಕ್ರವಾರ ರಾತ್ರಿ 9.30ರ ವೇಳೆಗೆ ಸಂಭವಿಸಿದ್ದು, ಗಾಯಾಳು ಗಳನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಸ್ಥಳಕ್ಕೆ ಮಣಿಪಾಲ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.