

ಡೈಲಿ ವಾರ್ತೆ:17/DEC/2024



ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಸೇರಿ ಏಳು ಮಂದಿಯ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ಬೆಂಗಳೂರು ಪೊಲೀಸರ ನಿರ್ಧಾರ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಏಳು ಮಂದಿ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ನಗರದ ಪೊಲೀಸರು ನಿರ್ಧರಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆಯಾಗಿ ಸುಮಾರು 6 ತಿಂಗಳ ಬಳಿಕ ನಟ ದರ್ಶನ್, ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಶುಕ್ರವಾರ ಜಾಮೀನು ಮಂಜೂರಾಗಿತ್ತು. ಇದರಂತೆ ಸೋಮವಾರ ನ್ಯಾಯಾಲಯಕ್ಕೆ ಜಾಮೀನು ಶ್ಯೂರಿಟಿ ಒದಗಿಸಿದ್ದ ಪವಿತ್ರಾ ಗೌಡ, ಪ್ರದೂಷ್, ನಾಗರಾಜ್ ಇನ್ನಿತರರು ಜೈಲಿನಿಂದ ಮಂಗಳವಾರ ಬಿಡುಗಡೆಯಾಗಿದ್ದಾರೆ.
ಸದ್ಯ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಹೋಗಲು ತೀರ್ಮಾನಿಸಿರುವ ನಗರ ಪೊಲೀಸರು, ಗೃಹ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಪೂರ್ವಾನುಮತಿ ದೊರೆತ ಬಳಿಕ ಸುಪ್ರೀಂನಲ್ಲಿ ಪ್ರಶ್ನಿಸುವುದಾಗಿ ನಗರ ಪೊಲೀಸ್ ಆಯುಕ್ತ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ತಿಳಿಸಿದ್ದಾರೆ.