ಡೈಲಿ ವಾರ್ತೆ:17/DEC/2024
ಸಜೀಪ : ಕಂಚಿಡ್ಕಪದವು ಘಣತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿಗಳ ಧಿಡೀರ್ ಬೇಟಿ
ಬಂಟ್ವಾಳ : ಸಜೀಪ ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿರುವ ಬಂಟ್ವಾಳ ಪುರಸಭೆಯ ಘಣತ್ಯಾಜ್ಯ ವಿಲೇವಾರಿ ಘಟಕಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಸ್ಥಳಕ್ಕೆ ಮಂಗಳವಾರ ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಅಸಮರ್ಪಕ ತ್ಯಾಜ್ಯ ವಿಲೇವಾರಿಯಿಂದ ಉಂಟಾಗಿರುವ ಸಮಸ್ಯೆಯ ಬಗ್ಗೆ ಸ್ಥಳೀಯರು ಕ್ಷೇತ್ರದ ಶಾಸಕ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ದೂರು ನೀಡಿದ್ದರು. ದೂರಿನನ್ವಯ ಕೂಡಲೇ ಸ್ಥಳ ಪರಿಶೀಲನೆ ಮಾಡುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಅವರು ಅಸಮರ್ಪಕವಾದ ತ್ಯಾಜ್ಯ ವಿಲೇವಾರಿಯ ಬಗ್ಗೆ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುವಂತೆ ಸೂಚಿಸಿದರು.
ಸಹಾಯಕ ಆಯುಕ್ತ ಹರ್ಷವರ್ದನ್, ಉಳ್ಳಾಲ ತಹಶಿಲ್ದಾರ್ ಪುಟ್ಟರಾಜು ಜಿಲ್ಲಾಧಿಕಾರಿಗಳ ಜೊತೆಗಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ವಕ್ಪ್ ಸಲಹಾ ಸಮಿತಿ ಮಾಜಿ ಉಪಾಧ್ಯಕ್ಷ ಎಸ್. ಅಬೂಬಕ್ಕರ್ ಸಜೀಪ, ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಬೋಳಮೆ, ಅಬ್ದುಲ್ ರಹಿಮಾನ್, ರಫೀಕ್ ಗೋಳಿಪಡ್ಪು. ಇಸ್ಮಾಯಿಲ್ ಗೋಳಿಪಡ್ಪು, ಸೋಮನಾಥ್ ಭಂಡಾರಿ, ಪ್ರವೀಣ್ ಆಳ್ವ , ಹನೀಫ್ ಸಜೀಪ, ಹಾಗೂ ಇನ್ನಿತರ ಪ್ರಮುಖರು ಹಾಜರಿದ್ದರು.