ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಸಂಬಂಧಿಸಿ ಸಾಮಾಗ್ರಿಗಳ ಸಮಸ್ಯೆ ಬಗೆಹರಿಸುವಂತೆ ಮನವಿ

ಕುಂದಾಪುರ: ಡಿ:17 ಉಡುಪಿ ಜಿಲ್ಲೆಯಾದ್ಯಂತ ಕಟ್ಟಡ ನಿರ್ಮಾಣ ಕಾಮಗಾರಿಗೆ ಬೇಕಾದ (ಜೆಲ್ಲಿ , ಮರಳು, ಕಲ್ಲು ) ಸರಿಯಾಗಿ ದೊರೆಯದ ಕಾರಣ ಕಟ್ಟಡ ನಿರ್ಮಾಣದ ಕಾರ್ಮಿಕರ ಕುಟುಂಬ ಬೀದಿಗೆ ಬರಬೇಕಾದ ಸ್ಥಿತಿ ಉಂಟಾಗಿದ್ದು,

ಉಡುಪಿ ಜಿಲ್ಲೆಯಲ್ಲಿ ಪ್ರತಿ ವರ್ಷವೂ ಇದೆ ಸಮಸ್ಯೆ ಪದೇ ಪದೇ ಆಗುತ್ತಿರುವುದರಿಂದ ಅವೈಜ್ಞಾನಿಕವಾದ ಕಾನೂನು ತೊಡಕುಗಳನ್ನು ಸರಿಪಡಿಸಿ,
ಈ ಸಮಸ್ಯೆಗೊಂದು ಶಾಶ್ವತ ಪರಿಹಾರ ನೀಡಿ ಕಾರ್ಮಿಕರ ಸಮಸ್ಯೆಗೆ ಪರಿಹಾರ ನೀಡುವಂತೆ ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ಮಜ್ದೂರ್ ಸಂಘದ ಅಧ್ಯಕ್ಷ ಗಿರೀಶ್ ಕುಂದಾಪುರ ಆಗ್ರಹಿಸಿದ್ದು,

ಒಂದು ವೇಳೆ ಈ ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ ಜಿಲ್ಲೆಯಾದ್ಯಂತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ಸಂಘಟನೆ ವತಿಯಿಂದ ಉಗ್ರವಾಗಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದ್ದು.

ಆದುದರಿಂದ ಸದರಿ ಈ ಪ್ರತಿಭಟನೆಗೆ ಅವಕಾಶವನ್ನ ನೀಡದೆ ಶೀಘ್ರವಾಗಿ ಕಟ್ಟಡ ಕಾರ್ಮಿಕರ ಸಮಸ್ಯೆಯನ್ನು ಪರಿಹರಿಸಬೇಕಾಗಿ ಕುಂದಾಪುರದ ಸಹಾಯಕ ಕಮಿಷನರ್ ಮಹೇಶ್ ಚಂದ್ರ ಇವರನ್ನು ಭೇಟಿಯಾಗಿ ಮನವಿ ಪತ್ರ ನೀಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ಮಜ್ದೂರ್ ಸಂಘದ ಪ್ರಧಾನ ಕಾರ್ಯದರ್ಶಿ ರಾಜು ದೇವಾಡಿಗ, ಜಿಲ್ಲಾ ಕಟ್ಟಡ ಕಾರ್ಮಿಕ ಸಂಘಟನಾ ಕಾರ್ಯದರ್ಶಿ ಸತೀಶ್ ಕೆ.ಟಿ., ಜಿಲ್ಲಾ ಕಟ್ಟಡ ಕಾರ್ಮಿಕ ಕೋಶಧಿಕಾರಿ ಸುರೇಶ್ ಪುತ್ರನ್, ಹಾಗೂ ಪ್ರಮುಖರಾದ ಕೃಷ್ಣಮೂರ್ತಿ ಯು, ಅನಿಲ್, ಪ್ರವೀಣ್, ಕೇಶವ ಟಿಟಿ ರಸ್ತೆ, ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿ ಮಜ್ದೂರ್ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.