ಡೈಲಿ ವಾರ್ತೆ:18/DEC/2024

ಕೋಟ: ಮನೆಯೊಂದರ ಅಂಗಳದಲ್ಲಿ ಚಿರತೆ ಓಡಾಟ – ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಕೋಟ: ಕುಂದಾಪುರ ತಾಲೂಕಿನ ಯಡಾಡಿ-ಮತ್ಯಾಡಿ ಗ್ರಾಮದ ಮನೆಯೊಂದರ ಅಂಗಳದಲ್ಲಿ ಚಿರತೆ ಓಡಾಟ ಮಾಡುತ್ತಿದ್ದ ವೀಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮನೆಯವರು, ನೆರೆ-ಹೊರೆಯವರು ಆತಂಕಗೊಂಡಿದ್ದಾರೆ.

ಕುಂದಾಪುರ ತಾಲೂಕಿನ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಡಾಡಿ-ಮತ್ಯಾಡಿ ಗ್ರಾಮದ ಕರಿನಕಟ್ಟೆ ರಾಮದಾಸ ಭಂಡಾರಿ ಎಂಬವರು ಮನೆಯ ಅಂಗಳದಲ್ಲಿ ಚಿರತೆ ಸಂಚಾರ ನಡೆಸಿದ್ದು, ಈ ವೀಡಿಯೋ ಒಂದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮನೆಯವರು ಆತಂಕ ವ್ಯಕ್ತಪಡಿಸಿದ್ದಾರೆ.

ಪದೇ ಪದೇ ಇಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಇದರ ಬಗ್ಗೆ ಸಂಬಂದಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.