ಡೈಲಿ ವಾರ್ತೆ:19/DEC/2024

ಕ್ರಿಸ್ಮಸ್ ಅಲಂಕಾರದ ವೇಳೆ ಕರೆಂಟ್ ಶಾಕ್ ಹೊಡೆದು ಬಾಲಕ ಮೃತ್ಯು!

ಬೆಳ್ತಂಗಡಿ: ಮನೆಯಲ್ಲಿ ಕ್ರಿಸ್ಮಸ್ ಅಲಂಕಾರದ ವೇಳೆ ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಪೆರೊಡಿತ್ತಾಯನ ಕಟ್ಟೆ ಬಳಿ ಇಂದು ನಡೆದಿದೆ.

ಮೃತ ವಿದ್ಯಾರ್ಥಿಯನ್ನು ತೆಂಕಕಾರಂದೂರು ಪೆರೋಡಿತ್ತಾಯನ ಕಟ್ಟೆ ಶಾಲಾ ಬಳಿಯ ಮನೆಯ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9ನೇ ತರಗತಿ ವಿದ್ಯಾರ್ಥಿ ದಿ.ಸ್ಟ್ಯಾನ್ಲಿ ಡಿಸೋಜ ಅವರ ಪುತ್ರ ಸ್ಟೀಫನ್ (14) ಎಂದು ಗುರುತಿಸಲಾಗಿದೆ.

ಕ್ರಿಸ್ ಮಸ್ ಪ್ರಯುಕ್ತ ಸಂಜೆ ಮನೆಗೆ ಸಾಂತಕ್ರೊಸ್ ಬರುವ ಹಿನ್ನೆಲೆಯಲ್ಲಿ ಮನೆಗೆ ಆಲಂಕಾರ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಬಂದರೂ ಅಷ್ಟೊತ್ತಿಗಾಗಲೇ ಮೃತ ಪಟ್ಡಿರುವುದಾಗಿ ತಿಳಿದು ಬಂದಿದೆ.

ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.