


ಡೈಲಿ ವಾರ್ತೆ:19/DEC/2024



ಅಶ್ಲೀಲ ಪದ ಬಳಕೆ ಆರೋಪ: ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಬಂಧನ
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ನೀಡಿದ ದೂರಿನ್ವಯ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 75,79ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ದೂರಿನ್ವಯ ಪೊಲೀಸರು ಸಿ.ಟಿ ರವಿಯನ್ನು ಸುವರ್ಣಸೌಧದಲ್ಲಿ ಬಂಧಿಸಿದ್ದಾರೆ. ಈ ವೇಳೆ ಬಿಜೆಪಿ ನಾಯಕರು ಪೊಲೀಸ್ ವಾಹನಕ್ಕೆ ಅಡ್ಡಿಯಾಗಿ ನಿಂತು ಹೈಡ್ರಾಮ ನಡೆಸಿದ್ದಾರೆ.