ಡೈಲಿ ವಾರ್ತೆ:21/DEC/2024

ನೆಲಮಂಗಲ: ಸರಣಿ ಅಪಘಾತ – ಕಾರಿನ ಮೇಲೆ ಉರುಳಿಬಿದ್ದ ಕಂಟೈನರ್: ಒಂದೇ ಕುಟುಂಬದ 6 ಮಂದಿಯ ದಾರುಣ ಸಾವು

ಬೆಂಗಳೂರು: ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ, ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್ ಒಂದು ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಒಟ್ಟು ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಡಿ. 21 ರಂದು ಶನಿವಾರ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ಯಲ್ಲಿ ಸಂಭವಿಸಿದೆ.

ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದ್ದು, ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ನಡೆದಿದೆ.
ಘಟನೆಯಿಂದ ಕಾರು ಸಂಪೂರ್ಣ ಅಪ್ಪಚ್ಚಿಯಾಗಿದ್ದು ಕಾರಿನೊಳಗಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತಪಟ್ಟ 6 ಮಂದಿ ವಿಜಯಪುರ ಮೂಲದ ಚಂದ್ರ ಯಾಗಪ್ಪ ಗೋಳ್ (48), ಗೌರಾಬಾಯಿ (42), ದೀಕ್ಷಾ (12), ಜಾನ್ (16), ವಿಜಯಲಕ್ಷ್ಮಿ (36), ಆರ್ಯ (6) ಎಂದು ಗುರುತಿಸಲಾಗಿದೆ.

ಈ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ 10 ಕಿಲೋಮಿಟರ್ ಉದ್ದದವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ.
ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಧಾವಿಸಿದ್ದು ಸ್ಥಳೀಯರ ನೆರವಿನಿಂದ ಕಾರಿನೊಳಗಿದ್ದ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ.