ಡೈಲಿ ವಾರ್ತೆ:21/DEC/2024
ಟಿವಿ ರಿಮೋಟ್ ಗಾಗಿ ಮಕ್ಕಳ ನಡುವೆ ಜಗಳ – ಇಲಿ ಪಾಷಾಣ ಸೇವಿಸಿ ಬಾಲಕಿ ಆತ್ಮಹತ್ಯೆ.!
ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸೂಳೆಬೈಲಿನಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ.
ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.
ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.