ಡೈಲಿ ವಾರ್ತೆ:26/DEC/2024
ಯೋಧ ಅನೂಪ್ ಪೂಜಾರಿ ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ, ಕರಾವಳಿದಾದ್ಯಂತ ಕಣ್ಣೀರ ಅಶುತರ್ಪಣಾ :ಮುಗಿಲು ಮುಟ್ಟಿದ ಊರ ಮತ್ತು ಮನೆಯವರ ಆಕ್ರಂದನ
ಕುಂದಾಪುರ: ಜಮ್ಮು-ಕಾಶ್ಮೀರದ ಪೂಂಚ್ ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ಸಮೀಪದ ಬೀಜಾಡಿಯ ಅನೂಪ್ ಪೂಜಾರಿ ಪಾರ್ಥಿವ ಶರೀರ ಇಂದು ಅವರ ಹುಟ್ಟೂರು ಬೀಜಾಡಿಯನ್ನು ತಲುಪಿದೆ.
ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರ ಮಂಗಳೂರಿಂದ ಬೆಳಗ್ಗೆ ಕುಂದಾಪುರದ ಬೀಜಾಡಿಗೆ ಆಗಮಿಸಿತು.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾಗಿ ಬಂದ ಅನೂಪ್ ಪೂಜಾರಿ ಅವರ ಅಂತಿಮ ಯಾತ್ರೆಯು ಸಾಸ್ತಾನ, ಕೋಟ ಹಾಗೂ ತೆಕ್ಕಟ್ಟೆ, ಕೋಟೇಶ್ವರದಿಂದ ನಡೆದು ಬೀಜಾಡಿಯ ಅವರ ಮನೆ ತಲುಪಿತು.
ಅಂತಿಮ ಯಾತ್ರೆಯಲ್ಲಿ ಸಾವಿರಾರು ಜನ ಭಾಗಿಯಾಗಿದ್ದರು. ಅಂತಿಮ ಯಾತ್ರೆ ಮುಗಿಸಿ ಹುತಾತ್ಮ ಯೋಧನ ದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು.
ಬೀಜಾಡಿ ಗ್ರಾಮದ ಮನೆಯಲ್ಲಿ ಅಂತಿಮ ವಿಧಿವಿಧಾನ ನಡೆಯಿತು. ಕುಟುಂಬದ ಆಪ್ತರಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು.
ಬಳಿಕ ಅವರು ಕಲಿತ ಬೀಜಾಡಿಪಡು ಸರ್ಕಾರಿ ಶಾಲೆ ಮೈದಾನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು. ಆಪ್ತರು, ಸಾರ್ವಜನಿಕರು, ಶಾಲಾ ಮಕ್ಕಳು, ಅಧಿಕಾರಿಗಳು, ಜನಪ್ರತಿನಿಧಿಗಳು ಅಂತಿಮ ನಮನಕ್ಕೆ ಸಲ್ಲಿಸಿದರು.
ಬೀಜಾಡಿ ಕಡಲ ತೀರದಲ್ಲಿ ಅನೂಪ್ ಅಂತ್ಯಸಂಸ್ಕಾರ ನಡೆಯಿತು. ಸಮುದ್ರ ತೀರದ ಸರ್ಕಾರಿ ಜಮೀನಿನಲ್ಲಿ ಇದಕ್ಕಾಗಿ ಸಿದ್ಧತೆ ಮಾಡಲಾಗಿದೆ. ಸಮುದ್ರ ತೀರದಲ್ಲಿ ಅನೂಪ್ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಲಾಯಿತು. ಅಂತಿಮ ವಿಧಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್, ಸೇನಾ ಸಿಬ್ಬಂದಿ ಭಾಗಿಯಾಗಿದ್ದರು.