ಡೈಲಿ ವಾರ್ತೆ:27/DEC/2024
ಡಿ :30 ರಂದು ಅಸ್ಪೃಶ್ಯತಾ ನಿವಾರಣೆ ಅರಿವು ಮೂಡಿಸುವ ಕಾರ್ಯಕ್ರಮ
ವರದಿ: ಮಾರುತಿ ಬಿ
ಕೊಟ್ಟೂರು: ತಾಲೂಕಿನ ರಾಂಪುರ ಗ್ರಾಮದಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಹಾಗೂ ಅವರ ಮೇಲಿನ ದೌರ್ಜನ್ಯ ಅರಿವು ಮೂಡಿಸುವ ಕಾರ್ಯಕ್ರಮವನ್ನು ವಿವಿಧ ಇಲಾಖೆಗಳ ಸಹಯೋಗದಲ್ಲಿ ಡಿ 30 ರಂದು ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದರು.
ಕೊಟ್ಟೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ಪ.ಜಾತಿ/ಪ.ವರ್ಗ ಅರಿವು ಮೂಡಿಸುವ ಕಾರ್ಯಕ್ರಮ ಡಿ 30 ರಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ
ಆದೇಶದಂತೆ ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ ಇವರ ಸಹಕಾರದೊಂದಿಗೆ ಮಧ್ಯಾಹ್ನ 2.30 ರಿಂದ 5 ಗಂಟೆವರೆಗೆ ಅರಿವು ಮೂಡಿಸುವ ಕಾರ್ಯಕ್ರಮ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಮ, ಗ್ರಾಮದ ಸುತ್ತಮುತ್ತಲಿನ ಜನರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದರು.