ಡೈಲಿ ವಾರ್ತೆ:28/DEC/2024

ಪುತ್ತೂರು: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು – ಮೂವರು ಸ್ಥಳದಲ್ಲೇ ಮೃತ್ಯು

ಪುತ್ತೂರು: ಕಾರೊಂದು ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಡಿ. 28 ರಂದು ಶನಿವಾರ ಬೆಳಿಗ್ಗೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ.

ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ, ಅವರ ಮಗ ಚಿದಾನಂದ್, ಪಕ್ಕದ ಮನೆಯ ರಮೇಶ್ ನಾಯ್ಕ ಮೃತರು ಎಂದು ತಿಳಿದು ಬಂದಿದೆ. ಇವರು ಸುಳ್ಯದಿಂದ ಪುತ್ತೂರಿನ ಪುಣಚಕ್ಕೆ ಆಗಮಿಸುತ್ತಿದ್ದ ವೇಳೆ ಬೆಳಗ್ಗಿನ ಜಾವ ಪರ್ಲಡ್ಕದಲ್ಲಿ ಈ ಅಪಘಾತ ಸಂಭವಿಸಿದೆ. ನಿದ್ದೆಯ ಮಂಪರಿನಲ್ಲಿ ಅಪಘಾತ ನಡೆದಿರುವುದಾಗಿ ಶಂಕಿಸಲಾಗಿದೆ.

ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.