


ಡೈಲಿ ವಾರ್ತೆ: 01/JAN/2025


ಉಳ್ಳಾಲ| ಸ್ಕೂಟರ್ ಗೆ ಲಾರಿ ಡಿಕ್ಕಿ – ಸ್ವಿಗ್ಗಿ ಡೆಲಿವರಿ ಬಾಯ್ ಮೃತ್ಯು!
ಉಳ್ಳಾಲ: ಲಾರಿ ಅಪಘಾತದಲ್ಲಿ ಸ್ಕೂಟರ್ ಸವಾರ, ಸ್ವಿಗ್ಗಿ ಡೆಲಿವರಿ ಬಾಯ್ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಡಿ.31 ರಂದು ಮಂಗಳವಾರ ತಡರಾತ್ರಿ ಉಳ್ಳಾಲ ರಾ.ಹೆ.66 ರ ಸಂಕೊಳಿಗೆ ಸಮೀಪ ಸಂಭವಿಸಿದೆ.
ದೇರಳಕಟ್ಟೆ ಪನೀರು ನಿವಾಸಿ ಉಮ್ಮರ್ ಫಾರುಕ್ ಯಾನೆ ಅಝರ್ (31) ಸಾವನ್ನುಪ್ಪಿದ ಯುವಕ.
ಅವಿವಾಹಿತರಾಗಿರುವ ಇವರು ಸ್ವಿಗ್ಗಿ ಡೆಲಿವರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಡಿ.31ರ ತಡರಾತ್ರಿ ತಲಪಾಡಿಯಿಂದ ಡೆಲಿವರಿ ತಲುಪಿಸಿ ತೊಕ್ಕೊಟ್ಟು ಕಡೆಗೆ ವಾಪಸ್ಸಾಗುವ ಸಂದರ್ಭ ಅದೇ ದಾರಿಯಲ್ಲಿ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟಿದ್ದರು. ಬಳಿಕ ಅದೇ ಲಾರಿಯ ಹಿಂಬದಿ ಚಕ್ರಗಳು ಅವರ ಮೇಲೆ ಚಲಿಸಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.