ಡೈಲಿ ವಾರ್ತೆ: 03/JAN/2025

10 ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿರುವ ರಾಯಚೂರಿನ ಮುಸ್ಲಿಂ ವ್ಯಕ್ತಿ

ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಗೌರಂಪೇಟೆ ನಿವಾಸಿ ಬಾಬು ಎಂಬ ಮುಸ್ಲಿಂ ಸಮುದಾಯದ ವ್ಯಕ್ತಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಯ ದರ್ಶನ ಪಡೆದಿದ್ದಾರೆ.

ಕಳೆದ ಕಳೆದ 10 ವರ್ಷಗಳಿಂದಲೂ ಇವರು ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿದ್ದಾರೆ.
ಈ ವರ್ಷ ಡಿ.28 ರಂದು ಶಬರಿಮಲೆ ಹತ್ತಿರದ ಪಂಪ ಸರೋವರದ ಬಳಿ ಸಂಪ್ರದಾಯದಂತೆ ಮಾಲೆ ಧರಿಸಿ, ಇರುಮುಡಿ ಕಟ್ಟಿಕೊಂಡು ಡಿ.31ರಂದು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ.

2014ರಿಂದ ಇಲ್ಲಿಯವರೆಗೆ ಪ್ರತಿವರ್ಷ ತಮ್ಮ ವಾರ್ಡ್‌ನ ಗೆಳೆಯರ ಬಳಗದವರೊಂದಿಗೆ ಬಾಬು ಅವರು ಮಾಲೆ ಧರಿಸಿಕೊಂಡು ಬರುತ್ತಿದ್ದಾರೆ.