ಡೈಲಿ ವಾರ್ತೆ: 03/JAN/2025
ಕಾಪು: ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ
ಕಾಪು: ಉಡುಪಿ ಕಲ್ಸಂಕ ಆಟೋ ರಿಕ್ಷಾ ನಿಲ್ದಾಣದಲ್ಲಿ ರಾತ್ರಿ ಪಾಳಿಯಲ್ಲಿ ಚಾಲಕನಾಗಿ ದುಡಿಯುತ್ತಿದ್ದ ಪಳ್ಳಿಗುಡ್ಡೆ ಕೋಟೆ ನಿವಾಸಿ ದೀಪಕ್ ಆರ್. (34) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಯಲಾಗಿದೆ.
ಅವಿವಾಹಿತ ದೀಪಕ್ ಆರ್. ಮದ್ಯ ಸೇವನೆ ಚಟವನ್ನು ಹೊಂದಿದ್ದು, ರಾತ್ರಿ ಪಾಳಯದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ರೂಂನಲ್ಲಿ ಮಲಗಿದ್ದರು. ಸಂಜೆ ತಾಯಿ ರೂಂಗೆ ಹೋಗಿ ನೋಡಿದಾಗ ಒಳಗಿನಿಂದ ಬಾಗಿಲನ್ನು ಲಾಕ್ ಮಾಡಲಾಗಿತ್ತು.
ಬಳಿಕ ನೆರೆಕರೆಯವರು ಸೇರಿ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ದೀಪಕ್ ರೂಂನ ಟಾರಸಿಯ ಕಬ್ಬಿಣದ ಹುಕ್ಕಿಗೆ ಬಟ್ಟೆ ತುಂಡನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕಾರ್ಯ ಮುಂದುವರಿಸಿದ್ದಾರೆ