ಡೈಲಿ ವಾರ್ತೆ: 04/JAN/2025
ಚಿಕ್ಕಬಳ್ಳಾಪುರ| ಜೆಡಿಎಸ್ ಮುಖಂಡನ ಬರ್ಬರ ಕೊಲೆ!
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗೇಟ್ ಬಳಿ ಲಾಂಗ್ನಿಂದ ಕೊಚ್ಚಿ ಜೆಡಿಎಸ್ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಜೆಡಿಎಸ್ ಮುಖಂಡ, ತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಕೊಲೆಯಾದ ದುರ್ದೈವಿ.
ಕೊಲೆಯಾದ ವೆಂಕಟೇಶ್ ಶುಕ್ರವಾರ (ಜ.03) ರಂದು ಟಿವಿಎಸ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ತಮ್ಮನಾಯಕನಹಳ್ಳಿ ಗೇಟ್ನಿಂದ ಮನೆಗೆ ತೆರಳುತ್ತಿದ್ದರು.
ಈ ವೇಳೆ ದುಷ್ಕರ್ಮಿಗಳು ಬೈಕ್ ಅಡ್ಡಗಟ್ಟಿ, ಲಾಂಗಿನಿಂದ ಕೊಚ್ಚಿ ವೆಂಕಟೇಶ್ರನ್ನು ಕೊಲೆ ಮಾಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮತ್ತು ಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.