ಡೈಲಿ ವಾರ್ತೆ: 04/JAN/2025

ಕೋಟತಟ್ಟು- ಕೊರಗ ಸಮುದಾಯಕ್ಕೆ ಮನೆ ನಿರ್ಮಾಣ, ಸಂಸದ ಕೋಟ ಅವರಿಂದ ಪರಿಶೀಲನೆ

ಕೋಟ: ಇಲ್ಲಿನ ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ದಾನಿಗಳ ಸಹಕಾರದೊಂದಿಗೆ ಇಲ್ಲಿನ ಕೊರಗ ಕಾಲೋನಿಯಲ್ಲಿ ವಾಸ್ತವ್ಯ ಹೊಂದಿದ ಸುಮಾರು ಎಂಟು ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುತ್ತಿದ್ದು ಈ ಹಿನ್ನಲ್ಲೆಯಲ್ಲಿ ಶನಿವಾರ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಕೊರಗ ಸಮುದಾಯದವರೊಂದಿಗೆ ಸುಮಾರು ಅರ್ಥ ತಾಸು ಸಮುದಾಯಕ್ಕೆ ಸರಕಾರದಿಂದ ಸಿಗುವ ಸವಲತ್ತುಗಳ ಹಾಗೂ ಅವರ ಜೀವನ ನಿರ್ವಹಣೆ ಕುರಿತು ಚರ್ಚಿಸಿದರು. ಅಲ್ಲದೆ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ರವರೊಂದಿಗೆ ಮನೆ ನಿರ್ಮಾಣದ ಮಾಹಿತಿ ಪಡೆದು ಪೂರ್ಣಗೊಳಿಸಲು ಬೇಕಾದ ತಯಾರಿಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಉಪಾದ್ಯಕ್ಷೆ ಸರಸ್ವತಿ ಪೂಜಾರಿ,ಸದಸ್ಯರಾದ ಪ್ರಮೋದ ಹಂದೆ, ಪ್ರಕಾಶ ಹಂದಟ್ಟು, ವಾಸು ಪೂಜಾರಿ, ವಿದ್ಯಾ ಸಾಲಿಯಾನ್, ರವೀಂದ್ರ ತಿಂಗಳಾಯ, ಸೀತಾ, ಮಾಜಿ ಸದಸ್ಯ ರಾಜೇಶ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.