ಡೈಲಿ ವಾರ್ತೆ: 09/JAN/2025

ನಾಗೂರು| ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಕುಂದಾಪುರ: ಚಾಲಕನ ನಿಯಂತ್ರಣ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ ನಾಗೂರು ಸಮೀಪ ಸಂಭವಿಸಿದೆ.

ಬೈಂದೂರಿನಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು
ನಾಗೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು ಅವರನ್ನು ತಕ್ಷಣ ಆಪತ್ಬಾಂಧವ ಇಬ್ರಾಹಿಂ ಗಂಗೊಳ್ಳಿಯವರು ತನ್ನ ಆಂಬುಲೆನ್ಸ್ ನಲ್ಲಿ ಮಣಿಪಾಲಕ್ಕೆ ಸಾಗಿಸಿರುತ್ತಾರೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕೇರಳ ಮೂಲದವರು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಲ್ಲಿ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು.