ಡೈಲಿ ವಾರ್ತೆ: 17/JAN/2025

ಕೋಟ| ಕೋಡಿ ಸಮುದ್ರ ಕಿನಾರೆಯಲ್ಲಿ 45 ವರ್ಷದ ಅಪರಿಚಿತ ಮಹಿಳೆಯ ಶವ ಪತ್ತೆ

ಕೋಟ: ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಗ್ರಾಮದ ಕೋಡಿ ಸಮುದ್ರ ಕಿನಾರೆಯಲ್ಲಿ ಸುಮಾರು 35 ರಿಂದ 45 ವರ್ಷದ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.

ಶುಕ್ರವಾರ ಬೆಳಿಗ್ಗೆ ಪಾರಂಪಳ್ಳಿ ಗ್ರಾಮದ ಕೋಡಿ ಸಮುದ್ರ ಕಿನಾರೆಯಲ್ಲಿ ಸುಮಾರು 35-45 ವರ್ಷದ ಅಪರಿಚಿತ ಮಹಿಳೆಯ ಶವವು ಕೊಳೆತ ರೀತಿಯಲ್ಲಿ ತೇಲುತ್ತಿರುವುದನ್ನು ನೋಡಿ ಸ್ಥಳೀಯರು ಕೊಡಲೇ ಕೋಟ ಪೊಲೀಸ್ ಠಾಣೆಗೆ ಕರೆ ಮಾಡಿ ತಿಳಿಸಿರುತ್ತಾರೆ.
ತಕ್ಷಣ ಪೊಲೀಸ್ ಉಪನಿರೀಕ್ಷಕರಾದ ರಾಘವೇಂದ್ರ ಸಿ. ಹಾಗೂ ಸಿಬಂದಿಗಳು ಸ್ಥಳಕ್ಕೆ ತೆರಲಿ ಪರಿಶೀಲಿಸಿದ್ದಾರೆ.

ಮೃತದೇಹವು ಬೇರೆ ಕಡೆಯಲ್ಲಿ ನೀರಿನಲ್ಲಿ ಅಥವಾ ಸಮುದ್ರದಲ್ಲಿ ಬಿದ್ದು ಮೃತಪಟ್ಟು ಸಮುದ್ರದಲ್ಲಿ ತೇಲಿ ಬಂದಿರುವುದಾಗಿದೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆ ಯುಡಿಆರ್‌ ಕ್ರಮಾಂಕ: 04/2024 ಕಲಂ:194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.
ಮೃತ ದೇಹವನ್ನು ಕೋಟ ಜೀವನ್ ಮಿತ್ರ ನಾಗರಾಜ್ ಪುತ್ರನ್ ಮಣಿಪಾಲ ಶವಗಾರಕ್ಕೆ ಸಾಗಿಸಿರುತ್ತಾರೆ.