ಡೈಲಿ ವಾರ್ತೆ: 21/JAN/2025

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್| ಕೊಟ್ಟಿಗೆಯಲ್ಲಿದ್ದ 7 ಹೋರಿಗಳು ಸಜೀವ ದಹನ

ಉತ್ತರ ಕನ್ನಡ: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂರ್ಟ್‌ನಿಂದ ಕೊಟ್ಟಿಗೆಯಲ್ಲಿದ್ದ 7 ಹೋರಿಗಳ ಸಜೀವ ದಹನವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇಮಗಾರದಲ್ಲಿ ನಡೆದಿದೆ.

ಹೇಮಗಾರದ ಮಹೇಶ್ ಹೆಗಡೆ ಎಂಬವರ ಮನೆಯಲ್ಲಿ ತಡರಾತ್ರಿ ಘಟನೆ ನಡೆದಿದೆ.
ಮನೆಯಲ್ಲಿದ್ದ ವೈರ್‌ಗೆ ಶಾರ್ಟ್ ಸರ್ಕ್ಯೂರ್ಟ್‌ನಿಂದಾಗಿ ಕಿಡಿ ಹೊತ್ತಿದ್ದು, ಕೊಟ್ಟಿಗೆಯ ಅಟ್ಟದ ಮೇಲಿರುವ ಹುಲ್ಲಿಗೆ ಈ ಕಿಡಿ ತಾಗಿ ಬೆಂಕಿ ಹತ್ತಿದೆ. ಹುಲ್ಲಿಗೆ ಬಿದ್ದ ಬೆಂಕಿ ಆವರಿಸಿ ಕೊಟ್ಟಿಗೆಯಲ್ಲಿದ್ದ 7 ಹೋರಿಗಳು ಸಜೀವ ದಹನವಾಗಿದೆ.
ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.