



ಡೈಲಿ ವಾರ್ತೆ: 22/JAN/2025


ಕುಂದಾಪುರ: ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು, ದಂಪತಿಯ ಬಂಧನ
ಕುಂದಾಪುರ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕುಂದಾಪುರ ತಾಲೂಕಿನ ಗುಜ್ಜಾಡಿ ನಿವಾಸಿ ವಿನಾಯಕ (41) ಹಾಗೂ ಆತನ ಪತ್ನಿ ಪ್ರಮೀಳಾ(30) ಎಂಬಾಕೆಯನ್ನು ಮಂಗಳವಾರ ರಾತ್ರಿ ಬಂಧಿಸಿದ್ದಾರೆ.
ಮಂಗಳವಾರ ಬೆಳಿಗ್ಗೆ ಕುಂದಾಪುರ ತಾಲೂಕಿನ ತ್ರಾಸಿ ಬೀಚ್ ಬಳಿಯ ಉದಯ ಪೂಜಾರಿ ಎಂಬವರ ಮನೆಯಲ್ಲಿ ಬ್ಯಾಗ್‌ನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೀಸ್-1, 16 ಗ್ರಾಂ ತೂಕದ ಬಳೆ-1 ಹಾಗೂ 3 ಗ್ರಾಂ ತೂಕದ 3 ಚಿನ್ನದ ಉಂಗುರವನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲೀಸರು,
ಬಂಧಿತರಿಂದ ಕಳವು ಮಾಡಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೀಸ್-1, 16 ಗ್ರಾಂ ತೂಕದ ಬಳೆ-1 ಹಾಗೂ 3 ಗ್ರಾಂ ತೂಕದ 3 ಚಿನ್ನದ ಉಂಗುರ ಸಹಿತ ಒಟ್ಟು 2 ಲಕ್ಷ ಮೌಲ್ಯದಆಭರಣ ಹಾಗೂ ಕೃತ್ಯಕ್ಕೆ ಬಳಸಿದ ಟಿವಿಎಸ್ ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.