ಡೈಲಿ ವಾರ್ತೆ: 23/JAN/2025

ಮಂಗಳೂರು| ಮಸಾಜ್ ಸೆಂಟರ್ ದಾಳಿ ಪ್ರಕರಣ: 9ಕ್ಕೂ ಹೆಚ್ಚು ರಾಮಸೇನಾ ಕಾರ್ಯಕರ್ತರ ಬಂಧನ

ಮಂಗಳೂರು: ಮಂಗಳೂರಿನಲ್ಲಿ ಅನೈತಿಕ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ ರಾಮ ಸೇನಾ ಸಂಘಟನೆಯ 9 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಸಾದ್‌ ಅತ್ತಾವರ ನೇತೃತ್ವದ ರಾಮ ಸೇನೆ ಕಾರ್ಯಕರ್ತರು ನಗರದ ಬಿಜೈ ಕೆಎಸ್‌ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಗೆ ದಾಳಿ ಮಾಡಿ ಪರಾರಿಯಾಗಿದ್ದರು.

ದಾಳಿ ಬಳಿಕ ರಾಮ ಸೇನೆ ಸಂಸ್ಥಾಪಕ ಪ್ರಸಾದ್‌ ಅತ್ತಾವ‌ರ್ ಅವರನ್ನು ಪೊಲೀಸರು ಬಂಧಿಸಿದ್ದು. ಇದೀಗ ಉಳಿದ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.