ಡೈಲಿ ವಾರ್ತೆ: 24/JAN/2025

ಕೋಟ| ವಂಚನೆ‌ ಪ್ರಕರಣ:
1 ವರ್ಷ ಜೈಲು, 9 ಸಾವಿರ ದಂಡ

ಕೋಟ: ವಂಚನೆ ಪ್ರಕರಣದ ಆರೋಪದ ಮೇಲೆ ಆಶಾಲತ ಪೈ ಅವರಿಗೆ 1 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 9ಸಾವಿರ ರೂಪಾಯಿ ದಂಡ ಮತ್ತು ಶಿಕ್ಷೆಯನ್ನು ಕುಂದಾಪುರದ ಹೆಚ್ಚುವರಿ ಎ,ಸಿ.ಜೆ ಮತ್ತಯ ಜೆ.ಎಂ.ಎಫ್.ಸಿ. ನ್ಯಾಯಾಲಯ ಆದೇಶಿಸಿದ್ದಾರೆ.

ಕುಂದಾಪುರ ತಾಲ್ಲೂಕಿನ ಹಾರ್ದಳ್ಳಿ ಮಂಡಳಿ ಗ್ರಾಮದ‌ ಆಶಲತಾ ಪೈ ಅವರನ್ನು ವಂಚನೆ ಆರೋಪದ‌ ಮೇಲೆ ಐ.ಪಿ.ಸಿ. ಪ್ರಕರಣವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು, ಉಡುಪಿ ಜಿಲ್ಲೆರವರ ನಿರ್ದೇಶನದಲ್ಲಿ ಮಾನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಉಡುಪಿ, ಪೊಲೀಸ್ ಉಪಾಧೀಕ್ಷಕರು, ಉಡುಪಿ ಉಪವಿಭಾಗ, ಪೊಲೀಸ್ ವೃತ್ತ ನಿರೀಕ್ಷಕರು, ಬ್ರಹ್ಮಾವರ ವ್ರತ್ತ ಅವರ ಮಾರ್ಗದರ್ಶನದಲ್ಲಿ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಹೇಶ್ ಪ್ರಸಾದ್ ತನಿಖೆ ನಡೆಸಿ, 2012 ರ ಡಿಸೆಂಬರ್ 26ರಂದು ಆರೋಪಿಯ ವಿರುದ್ಧ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಕುಂದಾಪುರದ ಹೆಚ್ಚುವರಿ ಎ.ಸಿ.ಜೆ. & ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶೆ ಶೃತಿ ಅವರು ಶುಕ್ರವಾರ ಆರೋಪಿಗೆ 1 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 9 ಸಾವಿರ ರೂಪಾಯಿ ದಂಡ ಶಿಕ್ಷೆ ಪ್ರಕಟಿಸಿದ್ದಾರೆ. ಈ ಪ್ರಕರಣದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕಿ ಉಮಾ ನಾಯ್ಕ ವಿಚಾರಣೆ ನಡೆಸಿದ್ದರು ಎಂದು‌ ಕೋಟ ಠಾಣೆಯ ಸಬ್ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.