ಡೈಲಿ ವಾರ್ತೆ: 25/JAN/2025

ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್| ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ಕಾಡ್ಗಿಚ್ಚು

ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯಕ್ಕೆ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರು.

ಗುಡ್ಡಕ್ಕೆ ಏರಿರುವ ಬೆಂಕಿ ನಂದಿಸಲು ಸಾಧ್ಯವಾಗದೆ ಪರದಾಡಿದರು. ಬೆಂಕಿಯ ಕೆನ್ನಾಲಿಗೆ 10ಕಿ.ಲೋ ಮೀಟರ್ ದೂರಕ್ಕೂ ಕಾಣಿಸುತ್ತಿದೆ. ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.

ಬೆಂಕಿ ಹೊತ್ತಿಕೊಂಡು ಎರಡು ಗಂಟೆ ಕಳೆದರೂ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದಿಲ್ಲ ಎಂದು ಸ್ಥಳೀಯರು ಆರೋಪಿಸಿದರು. ಈ ಭಾಗದಲ್ಲಿ ವನ್ಯಜೀವಿ ಮತ್ತು ಸಸ್ಯ ಸಂಪತ್ತು ಅಪಾರ ಪ್ರಮಾಣದಲ್ಲಿದೆ. ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಪರದಾಡಿದರು.