ಡೈಲಿ ವಾರ್ತೆ: 25/JAN/2025
ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ| ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!
ಚಾಮರಾಜನಗರ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಅಚಾನಕ್ಕಾಗಿ ಕಿಟಕಿಯಿಂದ ತಲೆ ಹೊರಹಾಕಿ ದಾರುಣವಾಗಿ ಪ್ರಾಣ ಕಳೆದುಕೊಂಡಿರುವುದು ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಗುಂಡ್ಲುಪೇಟೆ-ನಂಜನಗೂಡು ಮಾರ್ಗದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬಸ್‌ನಿಂದ ಮಹಿಳೆ ತಲೆ ಹೊರ ಹಾಕಿದಾಗ, ಗೂಡ್ಸ್ ಲಾರಿ ಡಿಕ್ಕಿಯಾಗಿ ರುಂಡ ಬೇರ್ಪಟ್ಟಿದೆ.
ಹಾಲಹಳ್ಳಿ ನಿವಾಸಿ ಶಿವಲಿಂಗಮ್ಮ (58) ಮೃತರು ಎಂದು ತಿಳಿದುಬಂದಿದೆ. ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಏಕಾಏಕಿ ಬಸ್‌ನ ಕಿಟಕಿಯಿಂದ ಹೊರಗೆ ತಲೆ ಹಾಕಿದ್ದಾಳೆ.
ಈ ವೇಳೆ ಪಕ್ಕದಲ್ಲಿ ವೇಗವಾಗಿ ಬಂದಂತಹ ಲಾರಿ ಡಿಕ್ಕಿ ಹೊಡೆದ ಪರಿಣಾಮ, ದೇಹದಿಂದ ರುಂಡ ತುಂಡಾಗಿ ಮಹಿಳೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಗುಂಡ್ಲುಪೇಟೆ ತಾಲೂಕಿನ ಪೊಲೀಸರು ಭೇಟಿ ನೀಡಿ, ಪರಿಶೀಲಿಸುತ್ತಿದ್ದಾರೆ.
ಅಪಘಾತ ನಡೆದ ಬಳಿಕ ಚಾಲಕ, ಲಾರಿ ನಿಲ್ಲಿಸದೇ ಪರಾರಿಯಾಗಿದ್ದು, ಈ ಸಂಬಂಧ ನಂಜನಗೂಡು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.