![](https://dailyvarthe.com/wp-content/uploads/2025/02/24x33_Add_PUCollegeSchool-scaled.jpg)
![](https://dailyvarthe.com/wp-content/uploads/2025/02/1001367255-1024x576.jpg?v=1738479393)
ಡೈಲಿ ವಾರ್ತೆ: 02/ಫೆ /2025
![](https://dailyvarthe.com/wp-content/uploads/2025/02/IMG-20250205-WA0168-1.jpg)
![](https://dailyvarthe.com/wp-content/uploads/2024/10/IMG-20241023-WA0255-scaled.jpg)
ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ: 2 ದಿನ ವಿಶ್ರಾಂತಿ ಸೂಚಿಸಿದ ವೈದ್ಯರು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿ ನೋವಿನ ಕಾರಣ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ. ಹೀಗಾಗಿ, ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ರದ್ದಾಗಿದೆ. ಚಿಕ್ಕಬಳ್ಳಾಪುರದ ಹೊಸೂರು ಗ್ರಾಮಕ್ಕೆ ಇಂದು ಸಿದ್ದರಾಮಯ್ಯ ಭೇಟಿ ನೀಡಬೇಕಿತ್ತು. ಹೀಗಾಗಿ ಬಿಗಿ ಭದ್ರತೆ ಕೂಡ ಮಾಡಲಾಗಿತ್ತು. ಆದರೆ ಇದೀಗ ದಿಢೀರ್ ಆಗಿ ಸಿದ್ದರಾಮಯ್ಯ ಭೇಟಿ ರದ್ದಾಗಿದೆ.
ಎರಡು ದಿನ ವಿಶ್ರಾಂತಿಗೆ ವೈದ್ಯರ ಸೂಚನೆ:
ಸಿಎಂ ಸಿದ್ದರಾಮಯ್ಯಗೆ ಎಡಗಾಲಿನ ಮಂಡಿ ನೋವು ಹೆಚ್ಚಾಗಿದೆ. ಹೀಗಾಗಿ ಸದ್ಯ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಡಾ. ಸತ್ಯನಾರಾಯಣ ಅವರು ಸಿಎಂ ಸಿದ್ದರಾಮಯ್ಯರನ್ನು ತಪಾಸಣೆ ನಡೆಸಿದ್ದಾರೆ. ಈ ಸಿದ್ದರಾಮಯ್ಯ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದೇ ಜಾಗದಲ್ಲಿ ಮತ್ತೆ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
2 ದಿನ ಪ್ರಯಾಣ ಮಾಡದೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.