ಡೈಲಿ ವಾರ್ತೆ: 03/ಫೆ /2025

ಬೆಂಗಳೂರು| ವಿವಿ ಹಾಸ್ಟೆಲ್​​ನಲ್ಲಿ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್​​ನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸೋಮವಾರ ನಡೆದಿದೆ.

ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಎಂಎ ಓದುತ್ತಿದ್ದ ಎಚ್.ಎನ್. ಪಾವನ ಎಂದು ಗುರುತಿಸಲಾಗಿದೆ.
ಅವರು ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾಸ್ಟೆಲ್‌ನಲ್ಲಿದ್ದ ಕೆಲ ಯುವತಿಯರು ಗಮನಿಸಿ ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಪಾವನ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದ ನಿವಾಸಿಯಾಗಿದ್ದು. ನಾನು ಗೆಳೆಯನೊಬ್ಬನನ್ನು ನಂಬಿದ್ದೆ, ಆತನಿಂದ ಮೋಸವಾಗಿದೆ. ಕ್ಷಮಿಸಿ ಅಪ್ಪ, ಅಮ್ಮ.. ಐ ಲವ್ ಯೂ ಎಂದು ಡೆತ್​ನೋಟ್​​ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.

ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ವಿದ್ಯಾರ್ಥಿನಿ ಪಾವನ ಶವ ಶಿಫ್ಟ್ ಮಾಡಲಾಗಿದ್ದು,​ ಪೋಷಕರು ಬೆಂಗಳೂರಿಗೆ ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.