ಡೈಲಿ ವಾರ್ತೆ: 04/ಫೆ /2025

ʻಕಬಾಲಿʼ ಚಲನಚಿತ್ರ ನಿರ್ಮಾಪಕ ಕೆಪಿ ಚೌಧರಿ ಗೋವಾದಲ್ಲಿ ಆತ್ಮಹತ್ಯೆಗೆ ಶರಣು

ಪಣಜಿ: ತೆಲುಗು ಚಲನಚಿತ್ರ ನಿರ್ಮಾಪಕ ಕೆಪಿ ಚೌಧರಿ (44) ಸೋಮವಾರ ಉತ್ತರ ಗೋವಾದ ಹಳ್ಳಿಯೊಂದರ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಪೊಲೀಸರು ತಿಳಿಸಿದ್ದಾರೆ.

ಚೌಧರಿ ಅವರ ಮೃತದೇಹವು ಸಿಯೋಲಿಮ್ ಗ್ರಾಮದ ಬಾಡಿಗೆ ಆವರಣದಲ್ಲಿ ಪತ್ತೆಯಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದ್ದು, ನಂತರ ಮಾಹಿತಿ ಹಂಚಿಕೊಳ್ಳುತ್ತೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಉತ್ತರ) ಅಕ್ಷತ್ ಕೌಶಲ್ ತಿಳಿಸಿದ್ದಾರೆ.

ರಜನಿಕಾಂತ್ ಅಭಿನಯದ ʻಕಬಾಲಿʼ ಚಿತ್ರವನ್ನು ನಿರ್ಮಿಸಿ ಯಶ್ವಿಯಾಗಿದ್ದ ಚೌಧರಿ ಅವರನ್ನ 2023ರಲ್ಲಿ ಸೈಬರಾಬಾದ್ ವಿಶೇಷ ಕಾರ್ಯಾಚರಣೆ ತಂಡವು ಡ್ರಗ್ಸ್‌ ಕೇಸ್‌ನಲ್ಲಿ ಬಂಧಿಸಿತ್ತು.