ಡೈಲಿ ವಾರ್ತೆ: 05/ಫೆ. /2025

ಮಹಾ ಕುಂಭಮೇಳ‌ – ರುದ್ರಾಕ್ಷಿ ಮಾಲೆ ಧರಿಸಿ ತ್ರಿವೇಣಿ ಸಂಗಮದಲ್ಲಿ ಮೋದಿ ಪುಣ್ಯಸ್ನಾನ

ಪ್ರಯಾಗ್‌ರಾಜ್‌: 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಪುಣ್ಯ ಸ್ನಾನ ಮಾಡಿದ್ದಾರೆ.

ಬೆಳಗ್ಗೆ 11:30 ಗಂಟೆ ಸುಮಾರಿಗೆ ಬೋಟ್‌ ಮೂಲಕ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮ್‌ಘಾಟ್‌ಗೆ ತೆರಳಿದ ಮೋದಿ ಕೊರಳಲ್ಲಿ ರುದ್ರಾಕ್ಷಿ ಮಾಲೆ, ಕೇಸರಿ ಹಾಗೂ ಕಡುನೀಲಿ ವಸ್ತ್ರ ಧರಿಸಿ ಪುಣ್ಯಸ್ನಾನ ಮಾಡಿದ್ದಾರೆ. ಇದೇ ವೇಳೆ ರುದ್ರಾಕ್ಷಿ ಮಾಲೆಯನ್ನು ಹಿಡಿದು ಸೂರ್ಯದೇವ ಹಾಗೂ ಗಂಗಾ ಮಾತೆಗೆ ನಮಿಸಿದ್ದಾರೆ.
ಇದಾದ ಬಳಿಕ ತಟದಲ್ಲಿ ನಿಂತು ಗಂಗಾ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ದೇಶದ ಒಳಿತಾಗಿ ಪ್ರಾರ್ಥಿಸಿದ್ದಾರೆ.