ಡೈಲಿ ವಾರ್ತೆ: 05/ಫೆ. /2025
ಕರ್ನಾಟಕ ಪ್ರದೇಶ ಕಾಂಗ್ರೇಸ್ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಉಡುಪಿ ಜಿಲ್ಲೆಯ ಬೈಂದೂರು ಬ್ಲಾಕ್ ಅಧ್ಯಕ್ಷರಾಗಿ ಮೊಹಮ್ಮದ್ ಹಾರೀಸ್ ಆಯ್ಕೆ
ಬೈಂದೂರು: ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ರವರ ಅನುಮೋದನೆಯಂತೆ, ಡಿ.ಸಿ.ಸಿ.ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ರವರ ಶಿಫಾರಸ್ಸಿನ ಮೇರೆಗೆ ಹಾಗೂ ಡಾ.ಸಿ.ಇ.ರಂಗಸ್ವಾಮಿ ರಾಜ್ಯಾಧ್ಯಕ್ಷರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ವಿಭಾಗ ರವರ ಆದೇಶದ ಮೇರೆಗೆ ಶ್ರೀ ಮೊಹಮ್ಮದ್ ಹಾರೀಸ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೇಸ್ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಉಡುಪಿ ಜಿಲ್ಲೆಯ ಬೈಂದೂರು ಬ್ಲಾಕ್ ಅಧ್ಯಕ್ಷರ ಹುದ್ದೆಗೆ ನೇಮಿಸಲಾಗಿದೆ.