ಡೈಲಿ ವಾರ್ತೆ: 06/ಫೆ. /2025
ಮಂಗಳೂರು | ಸೆಲೂನ್ ದ್ವಂಸ ಪ್ರಕರಣ – ಪ್ರಸಾದ್ ಅತ್ತಾವರ ಸಹಿತ 11 ಮಂದಿಗೆ ಜಾಮೀನು
ಮಂಗಳೂರು: ನಗರದ ಬಿಜೈ ಸೆಲೂನ್‌ನಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಸೇನೆಯ ಸ್ಥಾಪಕ ಅಧ್ಯಕ್ಷ ಪ್ರಸಾದ್ ಅತ್ತಾವರ ಸಹಿತ 11 ಮಂದಿ ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.
ಈ ಪ್ರಕರಣದಲ್ಲಿ 14 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಆ ಪೈಕಿ ಮೂವರು ಜಾಮೀನಿಗೆ ಅರ್ಜಿ ಸಲ್ಲಿಸಿರಲಿಲ್ಲ. ಅರ್ಜಿ ಸಲ್ಲಿಸಿದ 11 ಮಂದಿಗೆ ನ್ಯಾಯಾಧೀಶರು ಷರತ್ತುಬದ್ಧ ಜಾಮೀನು ನೀಡಿದೆ.
ಜ. 23ರಂದು ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿಯ ಕಲರ್ಸ್ ಹೆಸರಿನ ಸಲೂನ್ ಮೇಲೆ ರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿ, ಅಲ್ಲಿನ ಪೀಠೋಪಕರಣಗಳನ್ನು ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ಅಲ್ಲಿದ್ದ ಮಹಿಳಾ ಸಿಬ್ಬಂದಿಗೆ ಹಲ್ಲೆ ನಡೆಸಿದ್ದರು. ಅಲ್ಲದೆ ಗಾಜುಗಳನ್ನು, ಪೀಠೋಪಕರಣಗಳನ್ನು ದ್ವಂಸ ಮಾಡಿ, ಅಲ್ಲಿದ್ದ ವಸ್ತುಗಳನ್ನು ಚಲ್ಲಾಪಿಲ್ಲಿಗೊಳಿಸಿದ್ದರು.