ಡೈಲಿ ವಾರ್ತೆ: 08/ಫೆ. /2025

ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ|
ಎಎಪಿಯ ಪ್ರಮುಖರಿಗೆ ಹಿನ್ನಡೆ: ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ

ದೆಹಲಿ: ದೆಹಲಿಯ 70 ಕ್ಷೇತ್ರಗಳಿಗೆ ಫೆಬ್ರವರಿ ಐದರಂದು ನಡೆದ ಚುನಾವಣೆಯಲ್ಲಿ 60.42%ರಷ್ಟು ಮತದಾನ ನಡೆದಿತ್ತು. ಸರಳ ಬಹುಮತಕ್ಕೆ 36 ಸ್ಥಾನಗಳ ಅಗತ್ಯವಿದೆ.

ಇಂದು ಬೆಳಿಗ್ಗೆ ನಡೆದ ವಿಧಾನಸಭೆ ಚುನಾವಣೆಯ ಮತ ಎಣಿಕೆಯ ಆರಂಭಿಕ ಹಂತದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

48 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡರೆ, ಎಎಪಿ 21 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿವೆ. ಕಾಂಗ್ರೆಸ್ 1 ಕ್ಷೇತ್ರದಲ್ಲಿ ಮುಂದಿದೆ.

ಎಎಪಿ ಸಂಚಾಲಕ ಅರವಿಂದ ಕೇಜ್ರವಾಲ್, ಮನೀಷ್ ಸಿಸೋಡಿಯಾ ಹಾಗೂ ಸತ್ಯೇಂದ್ರ ಜೈನ್ ಹಿನ್ನಡೆಯಲ್ಲಿದ್ದಾರೆ. ಮುಖ್ಯಮಂತ್ರಿ ಅತಿಶಿ ಮುನ್ನಡೆ ಕಾಯ್ದುಕೊಂಡಿದ್ದಾರೆ.